ದೇವನಹಳ್ಳಿ: ಪಟ್ಟಣದ ಹೊರವಲಯದಲ್ಲಿ ರುವ ಡಾಬಾ ಗೇಟ್ ನಲ್ಲಿರುವ ರೈಲ್ವೆ ಅಂಡರ್ ಪಾಸ್ ಸೇರಿದಂತೆ ತಾಲೂಕಿನಲ್ಲಿ ಎಲ್ಲೆಲ್ಲಿ ರೈಲ್ವೆ ಅಂಡರ್ ಪಾಸ್‌ಗಳನ್ನು ನಿರ್ಮಾಣ ಮಾಡಿದ್ದಾರೋ ಅಲ್ಲೆಲ್ಲಾ ಮಳೆಯ ನೀರು 10 ಅಡಿಗಿಂತ ಹೆಚ್ಚು ನೀರು ನಿಂತಿದ್ದು, ಜನರ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ ಎಂದು ಅಂಬೇಡ್ಕರ್ ಯುವ ಸಾಮ್ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷ ಎಸ್.ಎಂ.ಆನಂದ್ ಕುಮಾರ್ ಬೆಂಗಳೂರಿನ ಉತ್ತರ ರೈಲ್ವೆ ಇಲಾಖೆ ಹಿರಿಯ ವಿಭಾಗೀಯ ಎಂಜಿನಿಯರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಬಿಬಿ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿರುವ ಐವಿಸಿ ರಸ್ತೆ ಸುಮಾರು 150 ರಿಂದ 200 ಹಳ್ಳಿಗಳ ಸಂಪರ್ಕ ಹೊಂದಿದ್ದು, ವಾಹನಗಳು ಸೇರಿದಂತೆ ಜನಸಂಚಾರ ಯಥೇಚ್ಚವಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ಈಗ ಮಳೆಯ ನೀರು ತುಂಬಿಕೊಂಡಿರುವುದರಿಂದ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ.
ಇದನ್ನೂ ಓದಿ:- ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು
ಅಂಡರ್ ಪಾಸ್‌ನಲ್ಲಿ ಸಂಗ್ರಹವಾದ ನೀರು ಸರಾಗವಾಗಿ ಹೊರಗೆ ಹೋಗಲು ವ್ಯವಸ್ಥೆ ಮಾಡದೇ ಇರುವ ಕಾರಣ ನೀರು ನಿಂತಿದೆ. ಅಂಡರ್ ಪಾಸ್‌ನಲ್ಲಿ ಗುಂಡಿಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರ ಪಯಣಕ್ಕೆ ತೊಂದರೆಯಾಗುತ್ತಿದೆ.
ಆದ್ದರಿಂದ ಸಂಬಂಧಪಟ್ಟ ರೈಲ್ವೆ ಇಲಾಖೆ ಅಧಿಕಾರಿಗಳು ಸಮಸ್ಯೆ ಪರಿಹರಿಸಿ ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಸಂಸ್ಥಾಪಕ ಅಧ್ಯಕ್ಷ ಆರ್.ವಿ.ಮಹೇಶ್ ಕುಮಾರ್, ರಾಜ್ಯ ಕಾರ್ಯಾಧ್ಯಕ್ಷ ಸಿಂಗ್ರಹಳ್ಳಿ ನರಸಿಂಹಯ್ಯ, ಜಿÇÉಾಧ್ಯಕ್ಷ ಪಾಳ್ಯ ಮುನಿರಾಜು, ತಾಲೂಕು ಅಧ್ಯಕ್ಷ ಪೂಜನಹಳ್ಳಿ ಪ್ರಕಾಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಬೆಟ್ಟೇನಹಳ್ಳಿ ಆಂಜಿನಪ್ಪ, ಮುನಿರಾಜು ಹಾಜರಿದ್ದರು.