Advertisement

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

01:51 AM Dec 29, 2024 | Team Udayavani |

ಬೆಂಗಳೂರು: ಮುಂದಿನ ನಾಲ್ಕೈದು ತಿಂಗಳಲ್ಲಿ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾಖೆಯಲ್ಲಿ 60 ಸಾವಿರ ಉದ್ಯೋಗ ನೇಮಕಾತಿ ನಡೆಯಲಿದ್ದು, ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕರ್ನಾಟಕದ ಯುವ ಸಮುದಾಯ ಇದರ ಅನುಕೂಲ ಪಡೆ ಯ ಬೇಕೆಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

Advertisement

ಅರಮನೆ ಮೈದಾನದಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ “ಕರ್ನಾಟಕ ಸಂಭ್ರಮ-50′ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿ ಯೋಜನೆ ರೂಪಿಸಿದ್ದಾರೆ. ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ರೈಲ್ವೇ ಮತ್ತು ಜಲಶಕ್ತಿ ಇಲಾಖೆಗೂ ಸಾವಿರಾರು ಕೋಟಿ ರೂ. ಅನುದಾನ ನೀಡಿದ್ದಾರೆ. ದೇಶದ ಶ್ರೇಯೋಭಿವೃದ್ಧಿಯ ವಿಚಾರದಲ್ಲಿ ದೊಡ್ಡ ಹೆಜ್ಜೆ ಇರಿಸಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸೇವೆಯಲ್ಲಿ ಶೇ. 20ರಿಂದ 30 ಮಂದಿ ಕನ್ನಡಿಗರಿರಬೇಕು ಎಂಬುದು ನಮ್ಮ ಆಸೆಯಾಗಿದೆ. ಶೀಘ್ರದಲ್ಲೇ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾ ಖೆಯಲ್ಲಿ 60 ಸಾವಿರ ಉದ್ಯೋಗ ನೇಮಕಾತಿ ನಡೆಯಲಿದ್ದು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆಯಬೇಕು. ನಾನು ಕೇಂದ್ರ ಸಚಿವರಾಗುವ ಮೊದಲು ವಿನಯ್‌ ಗುರೂಜಿ ಅವರು ಕನ್ನಡ ಭಾಷೆಯಲ್ಲಿ ಕೇಂದ್ರ ಸೇವೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಕನ್ನಡಿಗರ ಹಿತದೃಷ್ಟಿಯಿಂದ ಸಚಿವನಾದ ಕೂಡಲೇ ಕನ್ನಡಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿದೆ ಎಂದು ಹೇಳಿದರು.

ಕರವೇ ಕಾರ್ಯದ ಬಗ್ಗೆ ಮೆಚ್ಚುಗೆ
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡ ನಾಡು-ನುಡಿಗಾಗಿ ಅನೇಕರು ಕೊಡುಗೆ ನೀಡಿದ್ದಾರೆ. ತಮ್ಮ ಮನೆ ಭಾಷೆ ಬೇರೆಯಾಗಿದ್ದರೂ ಭಿನ್ನ ರೀತಿಯ ಸಾಹಿತ್ಯ ರಚನೆ ಮಾಡಿ ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಸೂರ್ಯ-ಚಂದ್ರ ಇರು ವ ವ ರೆಗೂ ಅವರ ಕೊಡುಗೆ ಹಾಗೆಯೇ ಉಳಿಯಲಿದೆ ಎಂದು ತಿಳಿಸಿದರು.

ಸಂಸತ್‌ನಲ್ಲಿ ಕನ್ನಡದಲ್ಲಿ ಉತ್ತರಿಸಲು ಮನವಿ
ಕೇಂದ್ರ ಸರಕಾರದ ಸೇವಾ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಕಾರಣರಾಗಿದ್ದಾರೆ. ಕನ್ನಡ ಅಷ್ಟೇ ಅಲ್ಲದೆ, ದೇಶದ ಸುಮಾರು 14 ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದಾರೆ. ಇದರಿಂದಾಗಿ ಕನ್ನಡ ಸೇರಿದಂತೆ ಸ್ಥಳೀಯ ಭಾಷೆಯ ಯುವಕರಿಗೆ ಅನುಕೂಲವಾಗಲಿದೆ ಎಂದು ವಿ.ಸೋಮಣ್ಣ ತಿಳಿಸಿದರು. ಸಂಸತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕನ್ನಡ ಭಾಷೆಯಲ್ಲಿ ಕೂಡ ಮಾತನಾಡಲು ಅವಕಾಶ ನೀಡುವಂತೆ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ಅವರಲ್ಲಿ ಮನವಿ ಮಾಡಿದ್ದೇನೆ. ಅವರಿಗೂ ಕನ್ನಡ ಭಾಷೆಯ ಮೇಲೆ ಅಪಾರ ಅಭಿಮಾನವಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next