Advertisement
ಈ ಸಂಬಂಧ ಪ್ರತ್ಯೇಕ ಕಡೆ ಮಾತನಾಡಿದ ಸಚಿವದ್ವಯರು, ರಾಜ್ಯದಲ್ಲಿ ಮಳೆ ಅವಾಂತರದಿಂದ ಕೃಷಿ ಜಮೀನಿನ ಮೇಲೆ ಆದ ಪರಿಣಾಮಗಳ ಬಗ್ಗೆ ವಿವರಣೆ ನೀಡಿದರು. ನಿಯಮಾನುಸಾರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದೂ ಭರವಸೆ ನೀಡಿದರು.
Related Articles
Advertisement
ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆ, 15 ದಿನಗಳಲ್ಲಿ ಪರಿಹಾರ: ಕೃಷ್ಣಬೈರೇಗೌಡ
ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಿನಲ್ಲಿಯೇ ಶೇ. 66ರಷ್ಟು ಅಧಿಕ ಮಳೆ ಸುರಿದ ಪರಿಣಾಮ ಭಾರೀ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ. ಮುಂದಿನ ಮೂರು ದಿನಗಳಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಗೀಡಾದ ರೈತರಿಗೆ 15 ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಶುಕ್ರವಾರ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ, ಸಂಗೇನಹಳ್ಳಿ ಮತ್ತಿತರೆಡೆ ಮಳೆಹಾನಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿ, ಹಿಂಗಾರು ಹಂಗಾಮಿನಲ್ಲಿ ದಾವಣಗೆರೆ, ಚಿತ್ರದುರ್ಗ, ವಿಜಯನಗರ, ತುಮಕೂರು ಸಹಿತ ಹಲವು ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ಸಾಧ್ಯತೆ ಇದೆ. ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ಅನಂತರ ಬೆಳೆ ನಷ್ಟದ ನಿಖರ ಪ್ರಮಾಣ ತಿಳಿಯಲಿದೆ. ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲೆಗಳ ಜಿಲ್ಲಾಧಿಕಾರಿ ಜತೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ. ಮಳೆಯಿಂದ ಬೆಳೆ, ಜೀವ ಹಾನಿ ಹಾಗೂ ಮನೆ ಬಿದ್ದು ಹೋಗಿದ್ದಲ್ಲಿ ತತ್‌ಕ್ಷಣ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರ್ ಖಾತೆಗಳಲ್ಲಿ 666 ಕೋ.ರೂ. ಇದೆ. ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನ ಕೊರತೆ ಇಲ್ಲ ಎಂದರು.
ಬೆಳೆ ನಷ್ಟ: ಜಿಲ್ಲಾಧಿಕಾರಿಗಳ ಜತೆ ಇಂದು ಸಿಎಂ ಸಭೆವ್ಯಾಪಕ ಮಳೆಯಿಂದ ಆದ ಹಾನಿ ಬಗ್ಗೆ ಪರಿಶೀಲಿಸಲು ಶನಿವಾರ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಡಿಸಿ, ಸಿಇಒ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.