Advertisement
ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದಲೇ ಬಿಟ್ಟು ಬಿಟ್ಟು ಮಳೆಯಾಗಿದ್ದು, ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮಳೆ ಬಿರುಸು ಪಡೆದಿತ್ತು. ಉಳಿದಂತೆ ಜಿಲ್ಲೆಯ ಬೆಳ್ತಂಗಡಿ, ಧರ್ಮಸ್ಥಳ, ಮಡಂತ್ಯಾರು, ನಾರಾವಿ, ಪೂಂಜಾಲಕಟ್ಟೆ, ಕಲ್ಲಡ್ಕ, ಬಿ.ಸಿ. ರೋಡು, ಬಂಟ್ವಾಳ, ಕನ್ಯಾನ, ವಿಟ್ಲ, ಪುತ್ತೂರು, ಉಪ್ಪಿನಂಗಡಿ, ಕಡಬ, ಸುಳ್ಯ, ಸುಬ್ರಹ್ಮಣ್ಯ, ಗುತ್ತಿಗಾರು, ಉಳ್ಳಾಲ, ಸುರತ್ಕಲ್, ಮುಲ್ಕಿ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆಯಾದ ವರದಿಯಾಗಿದೆ.
Related Articles
Advertisement
ಇನ್ನೆರಡು ದಿನ ಉತ್ತಮ ಮಳೆ ಸಾಧ್ಯತೆ:
ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಆ. 30 ಮತ್ತು 31ರಂದು ರಾಜ್ಯ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆ.30ರಂದು “ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಆ. 31ರಂದು “ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಐಎಂಡಿ ಮಾಹಿತಿಯಂತೆ ರವಿವಾರ ಪಣಂಬೂರಿನಲ್ಲಿ 26.5 ಡಿ.ಸೆ. ಗರಿಷ್ಠ ಮತ್ತು 22 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.