Advertisement

ಮಲೆನಾಡಲ್ಲಿ ಮತ್ತೆ ಮಳೆ 

06:40 AM Aug 30, 2018 | Team Udayavani |

ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮಳೆ ಮುಂದುವರಿದಿದೆ. ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಸುಬ್ರಹ್ಮಣ್ಯದಲ್ಲಿ ರಾಜ್ಯದಲ್ಲಿಯೇ ಅಧಿಕ, 9 ಸೆಂ.ಮೀ. ಮಳೆ ಸುರಿಯಿತು.

Advertisement

ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಪುನ: ಆರಂಭಗೊಂಡಿದ್ದು, ಮಂಗಳವಾರ ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇದರಿಂದಾಗಿ ತುಂಗಾ, ಶರಾವತಿ,ನೇತ್ರಾವತಿ, ಅಘನಾಶಿನಿ ಸೇರಿದಂತೆ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ತರೀಕೆರೆ ತಾಲೂಕು ಸೀತಾಪುರ ಕಾವಲ್‌ನಲ್ಲಿ ಮಳೆಯಿಂದಾಗಿ 5 ಮನೆಗಳಿಗೆ ಹಾನಿಯಾಗಿದೆ. ನಾರಾಯಣಪುರ
ಜಲಾಶಯದಿಂದ ಏಕಾಏಕಿ ಕೃಷ್ಣಾ ನದಿಗೆ ನೀರು ಬಿಟ್ಟ ಪರಿಣಾಮ ರಾಯಚೂರು ಜಿಲ್ಲೆ ಚಿಂಚೋಡಿ ಬಳಿ ನದಿಯ ನಡುಗಡ್ಡೆಯಲ್ಲಿ ಸುಮಾರು 15 ಜನ ಸಿಲುಕಿಕೊಂಡರು. ಈ ಪೈಕಿ 12 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಮೂವರು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ. ಈ ಮಧ್ಯೆ, ಜಲಾನಯನ ಪ್ರದೇಶವ್ಯಾಪ್ತಿಯಲ್ಲಿ ಮಳೆಯಾದ ಕಾರಣ ಸೂಫಾ ಅಣೆಕಟ್ಟಿನಿಂದ 3 ಕ್ರಸ್ಟ್‌ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.

ಈ ಮಧ್ಯೆ, ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆ
ಸುರಿಯುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next