Advertisement
ಉಡುಪಿ ಜಿಲ್ಲಾದ್ಯಂತ ಮಂಗಳವಾರ ಹಲವೆಡೆ ಸಾಧಾರಣ ಮಳೆಯಾಗಿದೆ. ಬೈಂದೂರು, ಕುಂದಾಪುರ, ಹೆಬ್ರಿ, ಪಡುಬಿದ್ರಿ, ಕಾರ್ಕಳ, ಅಜೆಕಾರು, ಉಡುಪಿ, ಕಾಪು, ಬ್ರಹ್ಮಾವರ ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣದೊಂದಿಗೆ ಬಿಟ್ಟುಬಿಟ್ಟು ಸಣ್ಣದಾಗಿ ಮಳೆ ಸುರಿದಿದೆ. ಮಂಗಳೂರಿನಲ್ಲಿ 29.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಕಡಿಮೆ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗು ವಾಡಿಕೆಗಿಂತ 0.7 ಡಿ.ಸೆ. ಹೆಚ್ಚಿತ್ತು.
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಮಳೆ ಮುಂದುವರಿದಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ಇಂಚು ಮಳೆಯಾಗಿದೆ. ಮಳೆ ತಾಲೂಕಿನಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣವಿತ್ತಾದರೂ 11 ಗಂಟೆಯ ಅನಂತರ ನಿರಂತರ ಮಳೆ ಸುರಿದಿದೆ. ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರ ಪೇಟೆ ಹಾಗೂ ಕುಶಾಲನಗರ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 26.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.43 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2712.85 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1380.25 ಮಿ.ಮೀ ಮಳೆಯಾಗಿತ್ತು.
Related Articles
ಬೆಂಗಳೂರು: ಮಂಗಳ ವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಯಿತು. ಕ್ಯಾಸಲ್‌ರಾಕ್, ಹೊನ್ನಾವರ ಮತ್ತು ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 7 ಸೆಂ.ಮೀ. ಮಳೆ ಸುರಿಯಿತು.
Advertisement
ಗುರುವಾರ ಬೆಳಗ್ಗೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗಲಿದ್ದರೆ, ಉಳಿದಂತೆ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.