Advertisement
ಅಲ್ಲದೆ, ಈ ಭಾಗಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಭರ್ಜರಿ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನಿ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಸೋಮವಾರ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮೀಪದ ಕಾಸರಕೋಡಿನಲ್ಲಿ 20 ಸೆಂ.ಮೀ. ಮಳೆ ಸುರಿದಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 11 ಸೆಂ.ಮೀ ಮಳೆ ಬಿದ್ದಿದೆ. ಹಾಗೆಯೇ ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 7 ಸೆಂ.ಮೀ. ಮಳೆ ಸುರಿದಿದೆ. ಜತೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.