Advertisement

Rain Alert: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹಳದಿ ಅಲರ್ಟ್‌ ಘೋಷಣೆ

08:39 PM Jul 22, 2024 | Team Udayavani |

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜು.23ರಿಂದ 26ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ , ಉಡುಪಿ, ದಕ್ಷಿಣ ಕನ್ನಡದ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ.

Advertisement

ಅಲ್ಲದೆ, ಈ ಭಾಗಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಭರ್ಜರಿ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನಿ ಸಿ.ಎಸ್‌.ಪಾಟೀಲ್‌ ಹೇಳಿದ್ದಾರೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 23ರಿಂದ 24ರ ವರೆಗೆ ಹಳದಿ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಜು.26ರ ವರೆಗೆ ಹಲವು ಕಡೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಕಾಸರಕೋಡಿನಲ್ಲಿ 20 ಸೆಂ.ಮೀ. ಮಳೆ!
ಸೋಮವಾರ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮೀಪದ ಕಾಸರಕೋಡಿನಲ್ಲಿ 20 ಸೆಂ.ಮೀ. ಮಳೆ ಸುರಿದಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 11 ಸೆಂ.ಮೀ ಮಳೆ ಬಿದ್ದಿದೆ. ಹಾಗೆಯೇ ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 7 ಸೆಂ.ಮೀ. ಮಳೆ ಸುರಿದಿದೆ. ಜತೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next