Advertisement
ದಕ್ಷಿಣ ಒಳನಾಡಿನಲ್ಲಿ ಸಿಯರ್‌ಝೋನ್ ಇದೆ. ಇದರ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ಅ.22ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಅ.22ರ ವರೆಗೆ ಮಳೆಯಾಗಲಿದೆ.
Related Articles
ರವಿವಾರ (ಅ.20) ಬೆಂಗಳೂರಿನಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Advertisement
ಏನಿದು ಸಿಯರ್‌ಝೋನ್ ?ಸಿಯರ್‌ಝೋನ್ ಎಂದರೆ ತೇವಾಂಶ ಆಗಸದತ್ತ ತೆಗೆದುಕೊಂಡು ಹೋಗುವ ಪ್ರಕ್ರಿಯೆಯಾಗಿದೆ. ತೇವಾಂಶಗಳಿಂದ ಮೋಡಗಳು ಸೃಷ್ಟಿಯಾಗಿ ಮೋಡಗಳಿಂದ ಮಳೆ ಸುರಿಯುತ್ತವೆ. ಇದು ಹವಾಮಾನದಲ್ಲಿ ನಡೆಯುವ ಒಂದು ಮಾದರಿಯ ಸಾಮಾನ್ಯ ಪ್ರಕ್ರಿಯೆಯಾಗಿದೆ. ಇದನ್ನು ಮೇಲ್ಮೆ ಸುಳಿಗಾಳಿ ಎಂದೂ ಕರೆಯಲಾಗುತ್ತದೆ. ಈ ಪ್ರಕ್ರಿಯೆ ಎಲ್ಲ ಪ್ರದೇಶಗಳಲ್ಲೂ ಸಾಮಾನ್ಯವಾಗಿ ನಡೆಯುತ್ತದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.