Advertisement
ನಗರದಲ್ಲಿ ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ 7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅ.19ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ದುರ್ಬಲಗೊಂಡಿದೆ. ಸರ್ಕ್ನೂಲೇಶನ್ ಆಂಧ್ರಪ್ರದೇಶದ ಕರಾವಳಿಯಲ್ಲಿ 5.8 ಕಿ.ಮೀ ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.21ರ ವರೆಗೆ ಹಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.