Advertisement

Rain Alert: ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ

09:56 PM Sep 11, 2024 | Team Udayavani |

ಬೆಂಗಳೂರು: ಮುಂದಿನ ಎರಡು ದಿನಗಳಲ್ಲಿ (48 ಗಂಟೆ)  ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ (Rain)ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಜೊತೆ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ.

Advertisement

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.14ರವರೆಗೆ ಹೆಚ್ಚಿನ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. ಜೊತೆಗೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಉಷ್ಣಾಂಶ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next