Advertisement

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

02:56 AM Oct 17, 2024 | Team Udayavani |

ಮಂಗಳೂರು: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಮಳೆ ಮುಂದುವರಿದಿತ್ತು. ಮಂಗಳವಾರಕ್ಕೆ ಹೋಲಿಸಿದರೆ ಮಳೆಯ ತೀವ್ರತೆ ತುಸು ಕಡಿಮೆ ಇತ್ತು.

Advertisement

ಮಂಗಳೂರು ನಗರದಲ್ಲಿ ಮಧ್ಯಾಹ್ನದವರೆಗೆ ಮೋಡದಿಂದ ಕೂಡಿದ ವಾತಾವರಣ ಇತ್ತು. ಮಧ್ಯಾಹ್ನ ಬಳಿಕ ಮಳೆ ಆರಂಭಗೊಂಡಿದೆ. ಅದೇ ರೀತಿ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಸುಬ್ರಹ್ಮಣ್ಯ, ಉಳ್ಳಾಲ, ಮೂಡುಬಿದಿರೆ, ಕಡಬ, ಸುಳ್ಯ ಸಹಿತ ಜಿಲ್ಲೆಯಾದ್ಯಂತ ದಿನವಿಡೀ ಬಿಟ್ಟು ಬಿಟ್ಟು ಮಳೆಯಾದ ವರದಿಯಾಗಿದೆ.

ಮಳೆಯ ಹಿನ್ನೆಲೆಯಲ್ಲಿ ಗರಿಷ್ಠ ತಾಪಮಾನ ಇಳಿಕೆ ಕಂಡಿದೆ. ಮಂಗಳೂರಿನಲ್ಲಿ ಅ.16 ರಂದು 29.8 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಇಳಿಕೆ ಮತ್ತು 23.1 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಕಡಿಮೆ ಮತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಅ.17ರಂದು ಕರಾವಳಿಯಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗುಡುಗು ಸಹಿತ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.

ಎಚ್ಚರಿಕೆ ವಹಿಸಲು ಸೂಚನೆ
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅ.16ರಿಂದ 19ರ ವರೆಗೆ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇದೆ. ಈ ಅವ ಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ದ.ಕ. ಜಿಲ್ಲಾ ಧಿಕಾರಿ ಮುಲ್ಲೈ  ಮುಗಿಲನ್‌ ತಿಳಿಸಿದ್ದಾರೆ.

ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರರು ಕೂಡಲೇ ದಡ ಸೇರ
ಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೊಗದಂತೆ ಸಾರ್ವಜನಿಕರು/ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಬೇಕು ಜಿಲ್ಲಾ ವಿಪತ್ತು ನಿರ್ವ ಹಣ ಪ್ರಾಧಿಕಾರ ಅಧ್ಯಕ್ಷರು ತಿಳಿಸಿದ್ದಾರೆ.

Advertisement

ಸುರತ್ಕಲ್‌: ಉತ್ತಮ ಮಳೆ
ಸುರತ್ಕಲ್‌: ರವಿವಾರದಿಂದ ಸುರತ್ಕಲ್‌ ಪಣಂಬೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಬುಧವಾರವೂ ಮಧ್ಯಾಹ್ನದ ಬಳಿಕ ಎರಡು ತಾಸು ಮಳೆಯಾಗಿದೆ.
ಸೋಮವಾರ ರಾತ್ರಿ ಗುಡುಗು ಸಹಿತ ಮಳೆಯಾಗಿದ್ದರಿಂದ ಸುಮಾರು ಎರಡು ತಾಸು ವಿದ್ಯುತ್‌ ವ್ಯತ್ಯವಾಗಿತ್ತು. ಪಣಂಬೂರು, ಸುರತ್ಕಲ್‌ ಸಹಿತ ಬೀಚ್‌ನಲ್ಲಿ ಪ್ರವಾಸಿಗರ ಸಂಖ್ಯೆಯೂ ಸಾಕಷ್ಟಿತ್ತು. ಇತ್ತೀಚೆಗೆ ಮಳೆ ಕಡಿಮೆಯಾಗಿದ್ದರಿಂದ ಸಮುದ್ರಕ್ಕಿಳಿಯಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಈಗ ಮತ್ತೆ ಮಳೆ ಆರಂಭವಾದ ಪರಿಣಾಮ ಸಮುದ್ರ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆಯೂ ಇರುವುದರಿಂದ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ.

ಉಡುಪಿಯಲ್ಲಿ ಉತ್ತಮ ಮಳೆ
ಉಡುಪಿ: ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ಬುಧವಾರ ಬಿಟ್ಟುಬಿಟ್ಟು ಮಳೆ ಸುರಿದಿದೆ. ಕುಂದಾಪುರ, ಕಾರ್ಕಳ, ಬೈಂದೂರು, ಉಡುಪಿ, ಕಾಪು, ಬ್ರಹ್ಮಾವರ ಸುತ್ತಮುತ್ತ ಇಡೀ ದಿನ ಮೋಡ ಕವಿದ ವಾತಾವರಣ ನಡುವೆ ಸಣ್ಣದಾಗಿ ಸಾಧಾರಣ ಮಳೆಯಾಗಿದೆ. ಮಂಗಳವಾರ ತಡರಾತ್ರಿಯೂ ಹಲವೆಡೆ ಉತ್ತಮ ಮಳೆಯಾಗಿದೆ. ಬುಧವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ ಕಾರ್ಕಳ 19.5, ಕುಂದಾಪುರ 33.4 , ಉಡುಪಿ 27.3, ಬೈಂದೂರು 23.0, ಬ್ರಹ್ಮಾವರ 18.9, ಕಾಪು 14.6, ಹೆಬ್ರಿ 26.3 ಮಿ. ಮೀ. ಮಳೆಯಾಗಿದ್ದು, ಜಿಲ್ಲೆಯಲ್ಲಿ 24.6 ಮಿ. ಮೀ. ಸರಾಸರಿ ಮಳೆಯಾಗಿದೆ.

ಉತ್ತಮ ಆರಂಭ ಪಡೆದ ಹಿಂಗಾರು
ಕರಾವಳಿ ಭಾಗದಲ್ಲಿ ಈ ಬಾರಿಯ ಹಿಂಗಾರು ಉತ್ತಮ ಆರಂಭ ಪಡೆದಿದೆ. ಅ.1ರಿಂದ 16ರ ವರೆಗೆ 120.6 ಮಿ.ಮೀ. ವಾಡಿಕೆ ಮಳೆಯಲ್ಲಿ 154.3 ಮಿ.ಮೀ. ಮಳೆಯಾಗಿ ಶೇ.28ರಷ್ಟು ಮಳೆ ಹೆಚ್ಚಳವಾಗಿದೆ. ದ.ಕ. ಜಿಲ್ಲೆಯಲ್ಲಿ ಶೇ.3, ಉಡುಪಿ ಜಿಲ್ಲೆಯಲ್ಲಿ ಶೇ. 47, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.39ರಷ್ಟು ಮಳೆ ಏರಿಕೆ ಕಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next