Advertisement

August ಅಂತ್ಯದವರೆಗೂ ಮಳೆ ಮುನ್ನೆಚ್ಚರಿಕೆ ಇರಲಿ: ಕೊಡಗು ಡಿಸಿ ವೆಂಕಟ್‌ ರಾಜಾ

12:16 AM Aug 19, 2024 | Team Udayavani |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆಯು ಸೆ. 30ರ ವರೆಗೂ ಇರಲಿದ್ದು, ಆಗಸ್ಟ್‌ ಅಂತ್ಯದವರೆಗೂ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿ ಕಾರಿ ವೆಂಕಟ್‌ ರಾಜಾ ನಿರ್ದೇಶನ ನೀಡಿದ್ದಾರೆ.

Advertisement

ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಜಿಲ್ಲೆಯ ಭೂ ಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಬೇಕು. ಈಗ ಮಳೆ ಕಡಿಮೆ ಆಗಿದ್ದರೂ ಸಹ ಮುಂದಿನ ದಿನಗಳಲ್ಲಿ ಉತ್ತಮ ಮಳೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಭಾರತೀಯ ಹವಾಮಾನ ಇಲಾಖೆ ಕಾಲಾ ಕಾಲಕ್ಕೆ ಹೊರಡಿಸುವ ಮಾಹಿತಿಯಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡ ಬೇಕು. ನೋಡಲ್‌ ಅಧಿಕಾರಿಗಳು, ವಿವಿಧ ವಿಭಾಗದ ಎಂಜಿನಿಯರ್‌ಗಳು, ತಾ.ಪಂ. ಇಒಗಳು, ತಹ ಶೀಲ್ದಾರರು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರಸ್ತೆ ಗುಂಡಿ ಬಿದ್ದಿರುವ ಬಗ್ಗೆ ಹಾಗೂ ರಸ್ತೆಯ ಗುಂಡಿ ಮುಚ್ಚಿರುವ ಸಂಬಂಧ ದಿನಾಂಕ ಜತೆಗೆ, ಜಿಪಿಎಸ್‌ ಛಾಯಾಚಿತ್ರ ಸಹಿತ ಮಾಹಿತಿ ಒದಗಿಸಬೇಕು. ಈ ಬಗ್ಗೆ ಆಯಾಯ ತಹಶೀಲ್ದಾರರು ಗಮನಿಸಬೇಕು. ಹಣವನ್ನು ಸಂಬಂಧಪಟ್ಟ ಎಂಜಿನಿಯರಿಂಗ್‌ ಇಲಾಖೆಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಶಾಲೆಗಳ ಮೇಲ್ಛಾವಣಿ ಸ್ಥಿತಿಗತಿ ಬಗ್ಗೆ ಗಮನಹರಿಸು ವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಹೇಳಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌, ಜಿ.ಪಂ. ಸಿಇಒ ಆನಂದ್‌ ಪ್ರಕಾಶ್‌ ಮೀಣ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್‌. ಐಶ್ವರ್ಯಾ, ವಿವಿಧ ಇಲಾಖೆ ಅಧಿಕಾರಿಗಳು, ಎಂಜಿನಿಯರ್‌ಗಳು, ತಾ.ಪಂ. ಇಒಗಳು, ತಹಶೀಲ್ದಾರರು, ಪೌರಾಯುಕ್ತರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next