Advertisement
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಗದಗ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಸೆ. 1ರಂದು ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್, ಸೆ. 2ರಂದು ಹಳದಿ ಅಲರ್ಟ್ ಘೋಷಿಸಿದೆ.
Related Articles
ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿ.ಸೆ. ಮತ್ತು 20 ಡಿ.ಸೆ ಇರಲಿದೆ.
Advertisement