ಬೆಂಗಳೂರು: ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗತಳಿವೆ. ಬೆಂಗಳೂರಿನಲ್ಲಿ ಜುಲೈ 25ರ ವರೆಗೆ ಅಲ್ಲಲ್ಲಿ ಹಗುರದಿಂದ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ.