Advertisement

ಕರಾವಳಿಯಲ್ಲಿ ಮಳೆ ಸಾಧ್ಯತೆ

12:19 AM Apr 18, 2023 | Team Udayavani |

ಮಂಗಳೂರು: ಕರಾವಳಿ ಭಾಗದಲ್ಲಿ ಉರಿ ಸೆಕೆ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಎ. 20 ಮತ್ತು 21 ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಮಳೆಯಾಗುವ ನಿರೀಕ್ಷೆ ಇದೆ.

Advertisement

ದ.ಕ. ಜಿಲ್ಲೆಯಲ್ಲಿ ಸೋಮವಾರ ಉರಿ ಬಿಸಿಲು ಮತ್ತು ಸೆಕೆಯಿಂದ ಕೂಡಿತ್ತು. ಬೆಳಗ್ಗಿನ ವೇಳೆ ಮೋಡದ ವಾತಾವರಣ ಇತ್ತು. ಐಎಂಡಿ ಮಾಹಿತಿಯಂತೆ ಮಂಗಳೂರಿನಲ್ಲಿ 35.3 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚಿತ್ತು. 27.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಹೆಚ್ಚಿತ್ತು.

Advertisement

Udayavani is now on Telegram. Click here to join our channel and stay updated with the latest news.

Next