Advertisement
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಯಾವುದೇ ಅಲರ್ಟ್ ಘೋಷಣೆ ಮಾಡಲಾಗಿಲ್ಲ. ಆದರೆ, ಕೆಲವೊಂದು ಕಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ 31 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ.ಸೆ. ಅಧಿಕ ಮತ್ತು 24.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.5 ಡಿ.ಸೆ. ಅಧಿಕ ಉಷ್ಣಾಂಶ ಇತ್ತು.
ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ರವಿವಾರ ಸಂಜೆ ಭಾರೀ ಮಳೆಯಾಗಿದೆ. ಗಡುಗು ಸಿಡಿಲಿನ ಅಬ್ಬರದೊಂದಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಭಾರೀ ಮಳೆಯಾಗಿದೆ. ಇದರಿಂದಾಗಿ ಚರಂಡಿಗಳು ತುಂಬಿ ಹರಿಯುತ್ತಿತ್ತು. ಚರಂಡಿ ಸಮರ್ಪಕವಾಗಿ ಇಲ್ಲದ ಕಾರಣ ಹಲವೆಡೆ ಕೆಸರು ಮಿಶ್ರಿತ ಮಳೆ ನೀರು ರಸ್ತೆಯಲ್ಲಿಯೇ ಹರಿದು ಹೊಳೆಯಂತಾಗಿತ್ತು.
Related Articles
Advertisement