Advertisement

ಕರಾವಳಿಯಲ್ಲಿ ಮಳೆ ಅಬ್ಬರ: ಉಭಯ ಜಿಲ್ಲೆಗಳಲ್ಲಿ ಜುಲೈ 27 ರಂದು ಶಾಲೆಗಳಿಗೆ ರಜೆ

10:07 PM Jul 26, 2023 | Team Udayavani |

ಮಂಗಳೂರು/ಉಡುಪಿ : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 27 ರಂದು (ಗುರುವಾರ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Advertisement

ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರೌಢ ಶಾಲೆಗಳವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿನ ಕ್ರಮ: ಡಿಸಿ
ಜಿಲ್ಲಾಧಿಕಾರಿಗಳ ಆದೇಶಕ್ಕೂ ಮುನ್ನ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಎಂದು ಸಾರುವ ಪ್ರಕಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಕುರಿತು ಡಿಸಿ ಮುಲ್ಲೈ ಮುಗಿಲನ್‌ ಪ್ರತಿಕ್ರಿಯಿಸಿದ್ದು, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

ಜಿಲ್ಲಾಡಳಿತ ಸೂಚನೆ
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ, ಪ್ರತೀ ತಾಲೂಕುಗಳಲ್ಲಿ ಕಾಳಜಿ
ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಜಿಲ್ಲಾಡಳಿತದಿಂದ ಸೂಚಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು
ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು
ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next