Advertisement
ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರದ ವಿವಿಧ ಕಡೆ ರವಿವಾರ ಸಾಧಾರಣ ಮಳೆಯಾಗಿದೆ. ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಬಿಟ್ಟುಬಿಟ್ಟು ಮಳೆ ಸುರಿದಿದೆ. ರವಿವಾರ ಬಿಸಿಲು ಮೋಡ ಕವಿದ ವಾತಾವರಣ ಹನಿಹನಿ ಮಳೆಯಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಯಾವುದೇ ಅಲರ್ಟ್ ಘೋಷಿಸದಿದ್ದರೂ ಮುಂದಿನ ಎರಡು ದಿನಗಳ ಕಾಲ ಕರಾವಳಿಯ ಕೆಲವು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ 45-55ಕಿ.ಮೀ ವೇಗದಲ್ಲಿ 65 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮಂಗಳೂರಿನಲ್ಲಿ 29.5 ಡಿ.ಸೆ. ಗರಿಷ್ಠ ಮತ್ತು 23.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.