ಚಿಕ್ಕೋಡಿ: ರಾಜ್ಯದ ಗಡಿ ಭಾಗದಲ್ಲಿ ಮಳೆರಾಯನ ರೌದ್ರನರ್ತನ ಕಡಿಯಾಗಿದೆ. ಆದರೆ ಕೊಂಕಣ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಿದ್ದು. ಹೀಗಾಗಿ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಗುರುವಾರದಿಂದ 8 ಅಡಿಯಷ್ಟು ಹೆಚ್ಚಳವಾಗಿದೆ.
ರಾಯಬಾಗ ತಾಲೂಕಿನ ಕುಡಚಿ ಸೇತುವೆ ಮುಳುಗಡೆಗೊಂಡಿದೆ. ಇದರಿಂದ ಮಹಾರಾಷ್ಟ್ರ ಕರ್ನಾಟಕ ಸಂಪರ್ಕ ಕಲ್ಪಿಸುವ ಸಾಂಗ್ಲಿ- ಬಾಗಲಕೋಟ ರಾಜ್ಯ ಹೆದ್ದಾರಿ ಬಂದ್ ಆಗಿದೆ.
ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳಿಗೆ ಮಹಾ ಮಳೆಯಿಂದ ರಾಜ್ಯಕ್ಕೆ 1.60 ಲಕ್ಷ ಕ್ಯೂಸೆಕ್ ಹೆಚ್ಚಿನ ನೀರು ಹರಿದು ಬರುತ್ತಿದೆ.
ಮಹಾರಾಷ್ಟ್ರ ರಾಜಾಪುರ ಬ್ಯಾರೇಜದಿಂದ ಕೃಷ್ಣಾ ನದಿಗೆ 1.21 ಲಕ್ಷ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ದೂಧಗಂಗಾ ಹಾಗೂ ವೇದಗಂಗಾ ನದಿಗಳಿಂದ 38 ಸಾವಿರ ಕ್ಯೂಸೆಕ್ ನೀರು ಬರುತ್ತಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಒಟ್ಟಾರೆ 1.55 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಬರುವ ನೀರಿನಷ್ಟೇ ಹಿಪ್ಪರಗಿ ಬ್ಯಾರೇಜ ಮೂಲಕ ಆಲಮಟ್ಟಿ ಜಲಾಶಯಕ್ಕೆ ಹೋಗುತ್ತಿದೆ.
ಇದನ್ನೂ ಓದಿ: ಮಲೆನಾಡಿನಲ್ಲಿ ಮಳೆಯ ಆರ್ಭಟ: ಪ್ರವಾಹಕ್ಕೆ ಮುಳುಗಿದ ಕಾರು, ಮಂಗಳೂರು ಶೃಂಗೇರಿ ಹೆದ್ದಾರಿ ಬಂದ್
ಮಹಾರಾಷ್ಟ್ರದ ಕೋಯ್ನಾ 142 ಮಿಮೀ. ಮಹಾಬಳೇಶ್ವರ 237 ಮಿಮೀ. ನವಜಾ 95 ಮಿಮೀ. ವಸರಣಾ 100 ಮಿಮೀ ಮಳೆಯಾಗಿದೆ ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ತಿಳಿಸಿದರು.
ಇದನ್ನೂ ಓದಿ:ಚಾರ್ಮಾಡಿಯಲ್ಲಿ ಮತ್ತೆ ಕುಸಿಯುತ್ತಿರುವ ಗುಡ್ಡ: ಸಂಚಾರಕ್ಕೆ ತಡೆ