ಚೆನ್ನೈ: ಚೆನ್ನೈ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಕೆಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿಯಂತೆ ತಮಿಳುನಾಡಿನಲ್ಲಿ ಡಿಸೆಂಬರ್ 1 ರಿಂದ 4 ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಶುಕ್ರವಾರ ಚೆನ್ನೈ ಮತ್ತು ತಮಿಳುನಾಡಿನ ಇತರ ಐದು ಜಿಲ್ಲೆಗಳಾದ ಚೆಂಗಲ್ಪಟ್ಟು, ತಿರುವಳ್ಳೂರು, ನಾಗಪಟ್ಟಿಣಂ, ರಾಮನಾಥಪುರಂ ಮತ್ತು ಕಾಂಚೀಪುರಂ ನಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದ್ದರೂ ಚೆನ್ನೈ ಮತ್ತು ಇತರ ಜಿಲ್ಲೆಗಳಲ್ಲಿ ಶುಕ್ರವಾರ ಯಾವುದೇ ಶಾಲೆಗಳಿಗೆ ರಜೆ ಘೋಷಿಸಲಾಗಿಲ್ಲ.
ಚೆಂಬರಂಬಕ್ಕಂ ಸರೋವರದಿಂದ ನೀರು ಬಿಡುಗಡೆಯಾದ ಪರಿಣಾಮ ಕಾಂಚೀಪುರಂ ಜಿಲ್ಲೆಯ ಅಡ್ಯಾರ್ ನದಿಯ ತಗ್ಗು ಪ್ರದೇಶಗಳು ಮತ್ತು ಆರು ಹಳ್ಳಿಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ವಾಯುಭಾರ ಕುಸಿತದಿಂದ ಡಿ. 4 ರ ಮುಂಜಾನೆ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಹೇಳಿದೆ.
ಇದನ್ನೂ ಓದಿ: Daily Horoscope: ವಧೂ ವರಾನ್ವೇಷಣೆಯಲ್ಲಿ ನಿರತರಾಗಿರುವವರಿಗೆ ಶುಭ ಸಮಾಚಾರ