Advertisement

ಮಳೆ ನಿಯಂತ್ರಣ: ವಿಪತ್ತು ನಿರ್ವಹಣಾ ತಂಡ ರಚನೆ

05:50 AM Jun 03, 2020 | Lakshmi GovindaRaj |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಅನಾಹುತ ತಪ್ಪಿಸುವ ಉದ್ದೇಶ ದಿಂದ ವಲಯವಾರು ವಿಪತ್ತು ನಿರ್ವಹಣಾ ತಂಡಗಳನ್ನು ರಚನೆ ಮಾಡಿ ಬಿಬಿಎಂಪಿ ಆಯುಕ್ತರು ಆದೇಶ ಮಾಡಿದ್ದಾರೆ. ಬಿಬಿಎಂಪಿಯ ಎಂಟು  ವಲಯಗಳಲ್ಲಿ ಈಗಾಗಲೇ ವಲಯ ಆಯುಕ್ತರಾಗಿ ರುವವರನ್ನೇ ನೋಡಲ್‌ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

Advertisement

ಈ ತಂಡವು ನಗರದಲ್ಲಿ ಮಳೆ ಸಂದರ್ಭದಲ್ಲಿ ತೆಗೆದು ಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಅಲ್ಲದೆ, ಮಳೆ ಸುರಿದ  ಮೇಲೆ ನಗರದಲ್ಲಿ ಸೃಷ್ಟಿಯಾಗುವ ಸಮಸ್ಯೆಗಳಿಗೂ ಈ ತಂಡಗಳ ಮೂಲಕ ಪರಿಹಾರ ಕಾರ್ಯಾಚರಣೆ ನಡೆಸಲು ಪಾಲಿಕೆ ಮುಂದಾಗಿದೆ.

ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿಯೂ  ಪತ್ಯೇಕ ವಿಪತ್ತು ನಿರ್ವಹಣಾ ತಂಡಗಳನ್ನು ರಚನೆ ಮಾಡಲಾಗಿದ್ದು, ಇದರಲ್ಲಿ ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಬೆಂಗಳೂರು ಜಲಮಂಡಳಿ ಹಾಗೂ ಸಂಚಾರ ವಿಭಾಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿ ಇದ್ದಾರೆ. ಈ ತಂಡಗಳಿಗೆ ಆಯಾ ವಲಯದ ವಿಶೇಷ ಆಯುಕ್ತರನ್ನು ನೋಡಲ್‌ ಅಧಿಕಾರಿಗಳ ನ್ನಾಗಿ ನೇಮಕ ಮಾಡಲಾಗಿದೆ. ಮಳೆ ಯಿಂದ ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗೆ, ಸಾರ್ವಜನಿಕರಿಗೆ ಉಂಟಾಗಬಹು ದಾದ  ಸವಾಲು ತಪ್ಪಿಸಲು ಈ ತಂಡ ನೆರವಾಗಲಿದೆ.

ಇನ್ನು ಮಳೆ ಅನಾಹುತ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಮನ್ವಯತೆ ಸಾಧಿಸುವು ದಕ್ಕಾಗಿ ವಿಪತ್ತು ನಿರ್ವಹಣಾ ತಂಡದಲ್ಲಿ ಬಿಬಿಎಂಪಿ, ಬೆಸ್ಕಾಂ, ಅಗ್ನಿಶಾಮಕ ವಿಭಾಗ,  ಜಲಮಂಡಳಿ ಹಾಗೂ ಸಂಚಾರ ವಿಭಾಗದ ಹಿರಿಯ ಅಧಿಕಾರಿಗಳನ್ನು ಸೇರಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next