Advertisement

ಮಳೆ; ತಂಪಾದ ಇಳೆ

05:05 AM May 18, 2020 | Lakshmi GovindaRaj |

ಬೆಂಗಳೂರು: ನಗರದಲ್ಲಿ ಭಾನುವಾರ ಗುಡುಗು ಸಹಿತ ಮಳೆ ಸುರಿದು ಇಳೆ ತಂಪಾಯಿತು. ಸೋಮವಾರವೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾನುವಾರ ರಾತ್ರಿ 9.30ರ ಸುಮಾರಿಗೆ ಶುರುವಾದ ಮಳೆ, ನಗರದ ವಿವಿಧೆಡೆ ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ಇದರಿಂದ ಕೆಲ ರಸ್ತೆಗಳು, ಸುರಂಗ ಮಾರ್ಗಗಳು, ಮೇಲ್ಸೇತುವೆಗಳಲ್ಲಿ ನೀರು ನಿಲುಗಡೆಯಾಗಿತ್ತು.

Advertisement

ಆದರೆ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಚಾರ ಅತ್ಯಂತ ವಿರಳವಾಗಿತ್ತು. ಹಾಗಾಗಿ, ಇದರ ಬಿಸಿ  ಜನರಿಗೆ ಅಷ್ಟಾಗಿ ತಟ್ಟಲಿಲ್ಲ. ಮೆಜೆಸ್ಟಿಕ್‌, ರೇಸ್‌ಕೋರ್ಸ್‌ ರಸ್ತೆ, ವಿಧಾನಸೌಧ ಸುತ್ತ, ಎಂ.ಜಿ. ರಸ್ತೆ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ರಾಜಾಜಿನಗರ, ಮಲ್ಲೇಶ್ವರ, ಡಬಲ್‌ ರಸ್ತೆ, ಹೆಬ್ಟಾಳ, ಜಯನಗರದಲ್ಲಿ ರಾತ್ರಿ 10ರ ನಂತರ  ತುಂತುರು ಮಳೆ ಶುರುವಾ ಯಿತು. ಮಳೆ ಅನಾಹುತ ಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲ ಎಂದು ಬಿಬಿಎಂಪಿ ನಿಯಂತ್ರಣ ಕೊಠಡಿ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಉಂಟಾಗಿರುವುದರಿಂದ ಕರಾವಳಿ ಮತ್ತು  ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಆಯ್ದ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನ ಮಳೆ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇದರ  ಪ್ರಭಾವ ತುಂಬಾ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್‌.ಪಾಟೀಲ್‌ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next