Advertisement

Rain ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ: ಕೆಲವೆಡೆ ಮಳೆ

12:16 AM Jan 07, 2024 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ, ರಾತ್ರಿ ವೇಳೆ ಮತ್ತೆ ಮಳೆಯಾಗಿದೆ. ಉಭಯ ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಕಂಡು ಬಂದಿತ್ತು.

Advertisement

ಸಂಜೆಯಾಗುತ್ತಲೇ ಬಂಟ್ವಾಳ ಸುತ್ತಮುತ್ತ ಹನಿಮಳೆಯಾಗಿದ್ದು, ಸುಳ್ಯ ತಾಲೂಕಿನ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಉಡುಪಿ, ಕುಂದಾಪುರ, ಕಾರ್ಕಳ, ಬೆಳ್ತಂಗಡಿಯಲ್ಲಿಯೂ ಮಳೆ ಸುರಿದಿದೆ.

ಅರಬಿ ಸಮುದ್ರದಲ್ಲಿ ಲಕ್ಷದ್ವೀಪ ಭಾಗದಲ್ಲಿ ಉಂಟಾಗಿರುವ ಕಡಿಮೆ ಒತ್ತಡ ಪ್ರದೇಶದ ಹಿನ್ನೆಲೆಯಲ್ಲಿ ಆಕಾಶದಲ್ಲಿ ಮೋಡದ ಚಲನೆ ಜೋರಾಗಿದೆ. ಇನ್ನು ಕೆಲವು ದಿನ ಮಳೆ ವಾತಾವರಣ ಕಂಡು ಬರುವ ಸಾಧ್ಯತೆಯಿದೆ. ಜತೆಗೆ ಸಮುದ್ರದಲ್ಲಿ 1.5ಮೀ ವರೆಗಿನ ಅಲೆಗಳ ಉಬ್ಬರವಿಳಿತವಿರುವುದರಿಂದ ತೀರದ ಪ್ರದೇಶದಲ್ಲಿ ಕಡಲು ಪ್ರಕ್ಷಬ್ಧವಾಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 32.4 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಸುಳ್ಯ, ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ
ಸುಳ್ಯ/ಸುಬ್ರಹ್ಮಣ್ಯ: ಸುಳ್ಯ ತಾಲೂಕಿನಾದ್ಯಂತ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗಿದೆ.

Advertisement

ಸಂಜೆ 6 ಗಂಟೆಯ ಬಳಿಕ ಧಾರಾಕಾರ ಮಳೆ ಸುರಿದಿದೆ. ಸುಳ್ಯ ನಗರದಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಮಳೆಯಾಗಿದೆ. 70 ಮಿಮಿಗಿಂತ ಅಧಿಕ ಮಳೆಯಾಗಿದೆ.

ಸುಳ್ಯ ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಭಾರೀ ಮಳೆಯಾಗಿದೆ. ಕಡಬ ಹಾಗೂ ಸುಬ್ರಹ್ಮಣ್ಯದಲ್ಲಿಯೂ ಭರ್ಜರಿ ಮಳೆ ಸುರಿದಿದೆ. ಶನಿವಾರ ಸಂಜೆ ವರೆಗೆ ಬಿಸಿಲ ವಾತಾವಾರಣ ಇದ್ದ ಸುಳ್ಯ ತಾಲೂಕಿನಲ್ಲಿ ಶನಿವಾರ ಸಂಜೆ ವೇಳೆ ಮಳೆ ಆರಂಭಗೊಂಡಿದೆ. ರಾತ್ರಿಯೂ ವಿವಿಧಡೆ ಭಾರೀ ಮಳೆ ಮುಂದುವರಿದಿದೆ. ವಿವಿಧ ಭಾಗಗಳಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ಮಳೆಯಾಗಿದೆ.

ಸುಳ್ಯ ತಾಲೂಕಿನ ಎಲಿಮಲೆ, ಮರ್ಕಂಜ, ವಳಲಂಬೆ ಮತ್ತಿತರ ಕಡೆಗಳಲ್ಲಿ ಧಾರಕಾರ ಮಳೆಯಾಗಿದೆ. ಸುಳ್ಯ ನಗರ, ಜಾಲೂÕರು, ಮಂಡೆಕೋಲು, ಬೆಳ್ಳಾರೆ, ಐವರ್ನಾಡು, ಕೊಲ್ಲಮೊಗ್ರು, ಅರಂತೋಡು ಪರಿಸರದಲ್ಲೂ ಉತ್ತಮ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next