Advertisement

ಮಳೆ ಹಾನಿ: ಪರಿಶೀಲನೆಗೆ ಕೇಂದ್ರದಿಂದ ರಾಜ್ಯಕ್ಕೆ 3 ತಂಡಗಳು

06:49 PM Sep 05, 2022 | Team Udayavani |

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಆಗಿರುವ ಮಳೆ ಹಾನಿಯನ್ನು ಪರಿಶೀಲನೆ ನಡೆಸಲು ಕೇಂದ್ರದಿಂದ 3 ತಂಡಗಳು ಆಗಮಿಸಲಿದ್ದು, ಸಪ್ಟೆಂಬರ್ 7 ರಿಂದ 9 ರ ವರೆಗೆ ವೀಕ್ಷಣೆ ನಡೆಸಲಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.

Advertisement

ಸತತ ಮಳೆಯಿಂದ ರಾಜ್ಯದಲ್ಲಿ ಅಪಾರ ಪ್ರಮಾಣದ ಪ್ರಾಣ ಹಾನಿ, ಆಸ್ತಿ ಹಾನಿ, ಮೂಲಭೂತ ಸೌಕರ್ಯಗಳ ಹಾನಿಯುಂಟಾಗಿದೆ. ಕೇಂದ್ರದಿಂದ ಒಟ್ಟು 13,654.75 ಕೋಟಿ ಅನುದಾನ ಬಿಡುಗಡೆಯಾಗಿದ್ದು, 12,642.82ಕೋಟಿ ಹಣವನ್ನು ವಿಪತ್ತು ನಿರ್ವಹಣೆಗೆ ಖರ್ಚು ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಸಚಿವರಾದ ಆರ್. ಅಶೋಕ್ , ವಿ. ಸೋಮಣ್ಣ, ಹಾಲಪ್ಪ ಆಚಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ.ಎಸ್.ಎನ್. ಪ್ರಸಾದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next