Advertisement

ಮಳೆ ಹಾನಿ ಪ್ರದೇಶಗಳ ಪರಿಶೀಲನೆ, ಮಾಹಿತಿ ಸಂಗ್ರಹ

03:49 PM Oct 25, 2019 | Suhan S |

ಕೆ.ಆರ್‌.ಪೇಟೆ: ತಾಲೂಕಿನಲ್ಲಿ ನಿರಂತರ ಮಳೆಯಿಂದ ನಷ್ಟ ಸಂಭವಿಸಿರುವ ಗ್ರಾಮಗಳಿಗೆ ಅಧಿಕಾರಿಗಳು ತೆರಳಿ ಮಾಹಿತಿ ಸಂಗ್ರಹಿಸಿ ಸೂಕ್ತ ಪರಿಹಾರ ನೀಡುವುದಾಗಿ ಕಂದಾಯ ನಿರೀಕ್ಷಕಿ ಚಂದ್ರಕಲಾ ತಿಳಿಸಿದರು.

Advertisement

ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ಮಳೆಗೆ ಕುಸಿದಿರುವ ನಂಜೇಗೌಡರ ಮನೆ ಪರಿಶೀಲಿಸಿ ಮಾತನಾಡಿದ ಅವರು, ಹದಿನೈದು ವರ್ಷಗಳ ಬಳಿಕ ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ. ಈ ಮಹಾಮಳೆಗೆ ತಾಲೂಕಾದ್ಯಂತ ಅನೇಕ ಗ್ರಾಮಗಳಲ್ಲಿ ಮನೆ, ಬೆಳೆಗೆ ಹಾನಿ ಉಂಟಾಗಿ ನಷ್ಟ ಸಂಭವಿಸಿದೆ. ಆದ್ದರಿಂದ ತಾಲೂಕು ಆಡಳಿತ ಸಂತ್ರಸ್ತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ನಷ್ಟ ಪರಿಶೀಲನೆಗೆ ಮಾಹಿತಿ ಸಂಗ್ರಹಿಸ ವರದಿ ನೀಡಲಾಗುವುದು.

ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಾಂತ್ವನ ಹೇಳಿದರು. ತೊಂದರೆಗೆ ಒಳಗಾದವರು ಕೂಡಲೇ ನೇರವಾಗಿ ತಾಲೂಕು ಕಚೇರಿ ಅಥವಾ ಸ್ಥಳೀಯ ನಾಡ ಕಚೇರಿಗಳಿಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಕಳುಹಿಸುವ ಜೊತೆಗೆ ಸೂಕ್ತ ಪರಿಹಾರ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕೃಷ್ಣೇಗೌಡ, ಸಮಾಜ ಸೇವಕ ಎಂ.ದಿನೇಶ್‌, ಮನೆ ಮಾಲೀಕ ನಂಜೇಗೌಡ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next