Advertisement
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ಅಪೂರ್ಣ ಕಾಮಗಾರಿ ಆಗುತ್ತಿರುವ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹಗೊಳ್ಳದೆ ಸರಾಗವಾಗಿ ಹರಿದು ಹೋಗಲು ಕ್ರಮವಹಿಸುವಂತೆ, ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಅನುಕೂಲವಾಗುವಂತೆ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಡ್ರೈನೇಜ್ ಕಲ್ಪಿಸಬೇಕು ಎಂದು ಮುಖ್ಯಾಧಿಕಾರಿ ಹಾಗೂ ಪಿಡಿಓಗಳ ಸಹಕರಾರದೊಂದಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ನವಯುಗ ಕನ್‌ಸ್ಟ್ರಕ್ಷನ್ಸ್ ಹಾಗೂ ಐಆರ್‌ಬಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
Related Articles
Advertisement
ಶಾಲೆಗಳ ದುರಸ್ತಿ
ತೀರ ನಾದುರಸ್ತಿಯಲ್ಲಿರುವ ಅಪಾಯವುಂಟಾಗುವ ಸಾಧ್ಯತೆ ಇರುವ ಶಾಲಾ ಕಟ್ಟಡಗಳನ್ನು ಪರಿಶೀಲಿಸಿ ದುರಸ್ತಿಗಾಗಿ ಜಿ. ಪಂ.ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸ ಲಾಯಿತು. ಶಾಲಾ ವಠಾರವನ್ನು ಶುಚಿತ್ವದಿಂದ ಇರಿಸಿಕೊಂಡು ನೆರೆಪೀಡಿತ ಪ್ರದೇಶಗಳು, ಸಂತ್ರಸ್ತರ ತಾತ್ಕಾಲಿಕ ವಸತಿ ಹಾಗೂ ಗಂಜಿಕೇಂದ್ರ ನಿರ್ಮಿಸಲು ಶಾಲಾ ಕಟ್ಟಡಗಳನ್ನು ಒದಗಿಸಲು ಹಾಗೂ ತುರ್ತು ಸಂದರ್ಭದಲ್ಲಿ ಶಾಲಾ ಶಿಕ್ಷಕರನ್ನು ನೆರೆ ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಳಲು ಸೂಚಿಸಲಾಯಿತು.
ಗಂಜಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಊಟದ ವ್ಯವಸ್ಥೆ
ಬಗ್ಗೆ ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ. ಶಾಲೆಗಳು ಪ್ರಾರಂಭವಾದ ಅನಂತರ ಪ್ರತಿದಿನ ಪ್ರಾರ್ಥನೆ ಮುಗಿದ ಅನಂತರ ಪ್ರಾಕೃತಿಕ ವಿಕೋಪದ ಬಗ್ಗೆ ತಿಳಿವಳಿಕೆ ನೀಡಲು ಶಿಕ್ಷಣ ಇಲಾಖೆಗೆ ಸೂಚಿಸಲಾಯಿತು.
ನದಿ ಉಪನದಿ ಹರಿಯುವ ಪ್ರದೇಶಗಳಲ್ಲಿ ನಿಗಾ ವಹಿಸುವುದು ಹಾಗೂ ನದಿಪಾತ್ರದಲ್ಲಿ ವಾಸಿಸುವ ಗ್ರಾಮಸ್ಥರ ಬಗ್ಗೆ ತೀವ್ರ ನಿಗಾವಹಿಸಬೇಕು. ಮುಂಜಾಗ್ರತೆಯಾಗಿ ನೀರಿನ ಒಳಹರಿವು ಹಾಗೂ ಹೊರ ಹರಿವಿನ ಮಟ್ಟದ ಮಾಹಿತಿಯನ್ನು ನೀರಾವರಿ ಇಲಾಖೆಯವರು ನೀಡುವಂತೆ ತಿಳಿಸಲಾಗಿದೆ.