Advertisement
ಮಂಗಳೂರಿನ ಹೊರ ವಲಯ, ಸುರತ್ಕಲ್, ಹಳೆಯಂಗಡಿ ಪರಿಸರದಲ್ಲಿ ಶುಕ್ರವಾರ ಮುಂಜಾನೆ ಮತ್ತು ರಾತ್ರಿ ವೇಳೆ ಸಾಧಾರಣ ಮಳೆ ಸುರಿದಿತ್ತು.
Related Articles
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ. ಉಜಿರೆ ಧರ್ಮಸ್ಥಳ ಸುತ್ತಮುತ್ತ ಹನಿ ಮಳೆಯಾಗಿದೆ.
Advertisement
ರಾಷ್ಟ್ರೀಯ ಹೆದ್ದಾರಿ ಬ್ಲಾಕ್ನಿಡಿಗಲ್-ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಟ್ಯಾಂಕರ್ ಒಂದು ಜಾರಿದ ಪರಿಣಾಮ ಹಲವು ಸಮಯ ಟ್ರಾಫಿಕ್ ಸಮಸ್ಯೆ ತಲೆದೋರಿತ್ತು. ಕನಕಮಜಲು: ಮರ, ಕಂಬ ರಸ್ತೆಗೆ
ಸಂಜೆ ಬೀಸಿದ ಗಾಳಿ ಮಳೆಗೆ ಕನಕಮಜಲಿನಲ್ಲಿ ರಸ್ತೆಗೆ ಮರ, ವಿದ್ಯುತ್ ಕಂಬ ಉರುಳಿ ಸಂಚಾರಕ್ಕೆ ತಡೆ ಉಂಟಾಯಿತು. ಕಡಲಬ್ಬರ ತುಸು ಬಿರುಸು
ಕುಂದಾಪುರ: ಗುರುವಾರ ಹಾಗೂ ಶುಕ್ರವಾರ ಮಂಗಳೂರು, ಉಳ್ಳಾಲ, ಮಲ್ಪೆ, ಗಂಗೊಳ್ಳಿ, ಭಟ್ಕಳ, ಹೊನ್ನಾವರ, ತದಡಿ, ಕಾರವಾರ ಸಹಿತ ಎಲ್ಲೆಡೆಯ ಕಡಲ ತೀರದ ಪ್ರದೇಶಗಳಲ್ಲಿ ಅಲೆಗಳ ಎತ್ತರ ಗರಿಷ್ಠ 3 ಅಡಿಯಿಂದ 4 ಅಡಿಯವರೆಗೆ ಇದ್ದುದು ಕಂಡು ಬಂದಿದೆ. ಗಾಳಿಯ ವೇಗವೂ ಹಗಲಿನಲ್ಲಿ ಗಂಟೆಗೆ ಗರಿಷ್ಠ 14 ರಿಂದ 21 ಕಿ.ಮೀ. ವರೆಗೆ ಬೀಸುತ್ತಿದೆ. ಮೂರು ದಿನ ಮಳೆ ಸಾಧ್ಯತೆ
ಮಂಗಳೂರು/ಉಡುಪಿ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಮೂರು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎ.20 ಮತ್ತು 21ರಂದು ಉತ್ತಮ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ “ಎಲ್ಲೋ ಅಲರ್ಟ್’ ಘೋಷಿಸಿದೆ. ಮಂಗಳೂರಿನಲ್ಲಿ ಶುಕ್ರವಾರ 34.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಮತ್ತು 26.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.8 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿತ್ತು.