Advertisement
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಕುಮಾರಪರ್ವತ ತಪ್ಪಲು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಪರಿಸದಲ್ಲಿ ಸಂಜೆ ಒಂದೂವರೆ ತಾಸು ಮಳೆಯಾಗಿದ್ದು, ದರ್ಪಣ ತೀರ್ಥ ನದಿಯಲ್ಲಿ ಭಾರೀ ನೀರು ಹರಿದು ಬಂತು. ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಳಿನೆಲೆ, ಹರಿಹರ ಪಲ್ಲತ್ತಡ್ಕ, ಬಳ್ಪ, ಎಡಮಂಗಲ, ಸುಳ್ಯದಲ್ಲೂ ಸೋಮವಾರ ಸಂಜೆ ಮಳೆಯಾಗಿದೆ.
ಬೆಳ್ತಂಗಡಿ: ತಾಲೂಕಿನಲ್ಲಿ ಸಂಜೆ ಉತ್ತಮ ಮಳೆಯಾಗಿದ್ದು, ಉಜಿರೆಯಿಂದ ಗುರುವಾಯನಕೆರೆ ಸಹಿತ ಮಡಂತ್ಯಾರು ವರೆಗೆ ವಾಹನ ದಟ್ಟಣೆ ಉಂಟಾಯಿತು.
Related Articles
Advertisement
ದ.ಕ. ಜಿಲ್ಲಾದ್ಯಂತ ಉತ್ತಮ ಮಳೆಮಂಗಳೂರು: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಸೋಮವಾರವೂ ಮಳೆ ಮುಂದುವರಿದಿದ್ದು, ಸಂಜೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಸೋಮವಾರ 31.3 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.3 ಡಿ.ಸೆ. ಇಳಿಕೆ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.2 ಡಿ.ಸೆ. ಏರಿಕೆ ಕಂಡಿತ್ತು.