Advertisement
ಮೂಡುಬಿದಿರೆ ಸಮೀಪದ ಬೆಳುವಾಯಿ, ವಾಲ್ಪಾಡಿ ಪರಿಸರದಲ್ಲಿ ಗುಡುಗು ಸಹಿತ ಮಳೆ ಸುರಿದಿದೆ.ಹವಾಮಾನ ಇಲಾಖೆಯ ಮಾಹಿತಿಯಂತೆ ಪಣಂಬೂರಿನಲ್ಲಿ 36.6 ಡಿ.ಸೆ. ಗರಿಷ್ಠ ಮತ್ತು 27.5 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಣ ಹವೆ ಮುಂದುವರಿದಿತ್ತು. ಕಲಬುರಗಿಯಲ್ಲಿ ಅತ್ಯಧಿಕ 40.9 ಡಿಗ್ರಿ ಸೆ. ಉಷ್ಣಾಂಶ ದಾಖಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ 34.7 ಡಿಗ್ರಿ ಸೆ. ಮತ್ತು ಪಣಂಬೂರಿನಲ್ಲಿ 36.6 ಡಿಗ್ರಿ ಸೆ. ಗರಿಷ್ಠ ಉಷ್ಣಾಂಶ ದಾಖಲಾಯಿತು.