Advertisement

ಮಳೆ ಅಬ್ಬರ; ವಿಜಯಪುರದಲ್ಲಿ ಜುಲೈ 28 ರಂದೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

10:47 PM Jul 27, 2023 | Vishnudas Patil |

ವಿಜಯಪುರ : ವಿಜಯಪುರ ಜಿಲ್ಲಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜುಲೈ 28 ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜುಲೈ-28) ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶಿಸಿದ್ದಾರೆ.

ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೊಷಿಸಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಸುರಿಯುತ್ತಿರಿವ ಮಳೆಯ ಕಾರಣ ಗುರುವಾರವೂ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ಮಳೆ ಮುಂದುವರೆದ ಕಾರಣ ಶುಕ್ರವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಭೂಬಾಲನ್ ಇದೇ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next