Advertisement

ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳ ಎಲ್ಲ ಸ್ಥಳಗಳಲ್ಲಿ ಮಳೆ

11:12 PM Jul 01, 2021 | Team Udayavani |

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕಡಿಮೆ ಒತ್ತಡ ಇರುವ ವಿಸ್ತರಿಸಿದ ಪ್ರದೇಶ ಇದೆ. ಇದರ ಪ್ರಭಾವದಿಂದ ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

Advertisement

ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 5ರವರೆಗೆ ಕೆಲವು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಹಾಗೂ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು   ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್‌. ಪಾಟೀಲ್‌ ತಿಳಿಸಿದ್ದಾರೆ.

ನೈರುತ್ಯ ಮುಂಗಾರು ರಾಜ್ಯದಲ್ಲಿ ಗುರುವಾರ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಪ್ರಮುಖವಾಗಿ ಬೆಂಗಳೂರು ಹಾಗೂ  ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 2 ಸೆಂ.ಮೀ. ಹಾಗೂ ಕಾರವಾರದಲ್ಲಿ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next