Advertisement

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

08:17 PM Mar 30, 2023 | Team Udayavani |

ಬೆಂಗಳೂರು: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಕಡೆ ಮುಂದಿನ ಮೂರು ದಿನ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ರಾಜ್ಯದ ಕೆಲವೆಡೆ ಮಳೆ: ಗುರುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರು 3 ಸೆಂ.ಮೀ., ಚಾಮರಾಜನಗರದ ಬಂಡೀಪುರ, ರಾಮನಗರದ ಚನ್ನಪಟ್ಟಣ ತಲಾ 2 ಸೆಂ.ಮೀ., ಚಾಮರಾಜನಗರ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 39.7 ಡಿ.ಸೆ. ತಾಪಮಾನ ದಾಖಲಾಗಿದೆ. ರಾಯಚೂರು 39, ಗದಗ 37.4, ಬಳ್ಳಾರಿ 38.3, ದಾವಣಗೆರೆ 36, ಬಿದರ್‌ 36, ವಿಜಯಪುರ 36.6, ಶಿವಮೊಗ್ಗ 36, ಮೈಸೂರು 35, ಬೆಂಗಳೂರು 34, ಮಂಡ್ಯ 35.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next