Advertisement

ಮಲೆನಾಡಿನಲ್ಲಿ ಮಳೆಯ ರೌದ್ರಾವತಾರ: ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ; ಜನಜೀವನ ಅಸ್ತವ್ಯಸ್ತ

09:53 AM Jul 15, 2021 | Team Udayavani |

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತುಂಗಾ-ಭದ್ರಾ, ಹೇಮಾವತಿ ನದಿಗಳ ನೀರಿನ ಹರಿವು ಹೆಚ್ಚಳವಾಗಿದೆ.

Advertisement

ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ. ರಾಜ್ಯ ಹೆದ್ದಾರಿ ಹಾದು ಹೋಗಿರುವ ಕಳಸ-ಹೊರನಾಡು ಸಂಪರ್ಕಿಸುವ ಸೇತುವೆ ಇದಾಗಿದೆ.

ನಿನ್ನೆಯಿಂದ (ಜು.14) ಬಿಟ್ಟು ಬಿಡದೇ ಕಳಸ, ಕುದುರೆಮುಖ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದೆ. ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ ಭಾಗದಲ್ಲೂ ವರುಣ ರೌದ್ರವತಾರ ತೋರಿದ್ದಾನೆ.

ರಾತ್ರಿ ಸುರಿದ ಅಧಿಕ‌ ಮಳೆಯಿಂದಾಗಿ ಮುತ್ತೋಡಿ ರಸ್ತೆ ಕುಸಿದಿದ್ದು, ಹೊನ್ನಾಳ ಚೆಕ್ ಪೋಸ್ಟ್ ಸಮೀಪದಲ್ಲಿ ರಸ್ತೆ ಮಧ್ಯೆ ಬಿರುಕು ಬಿಟ್ಟಿದ್ದು ಸಂಚಾರ ಸ್ಥಗಿತಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next