Advertisement

ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ

02:27 PM Mar 30, 2019 | Lakshmi GovindaRaju |

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದ್ದು, ಕಾಫಿ ಬೆಳೆಗಾರರ ಮುಖದಲ್ಲಿ ಹರ್ಷ ಮೂಡಿಸಿದೆ.  ಮಧ್ಯಾಹ್ನ 3ರ ಸುಮಾರಿಗೆ ಗುಡುಗು, ಮಿಂಚಿನಿಂದ ಆರಂಭವಾದ ಮಳೆ ಒಂದೂವರೆ ಗಂಟೆಗೂ ಅಧಿಕ ಕಾಲ ಸುರಿಯಿತು. ಕಾಫಿಯ ಹೂಮಳೆ ಎಂದೆ ಕರೆಯಲ್ಪಡುವ ರೇವತಿ ಮಳೆ ಸ್ವಾಭಾವಿಕವಾಗಿ ಮಾ.31ಕ್ಕೆ ಆರಂಭವಾಗುತ್ತದೆ. ಈ ವರ್ಷ ಎರಡು ದಿನ ಮುಂಚಿತವಾಗಿ ಆರಂಭವಾಗಿದೆ ಎಂಬುದು ಬೆಳೆಗಾರರ ಅಭಿಪ್ರಾಯ.

Advertisement

ಮಳೆ ಸುರಿದಿದ್ದರಿಂದ ಕಾಫಿ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸುತ್ತಮುತ್ತಲ ಪ್ರದೇಶದಲ್ಲಿ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಬಾಳೆಹೊನ್ನೂರಿನ ರೇಣುಕಾ ನಗರದಲ್ಲಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಹಾವೇರಿ ತಾಲೂಕಿನ ವಿವಿಧೆಡೆಯೂ ಸಂಜೆ ವೇಳೆ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ.

ಗದಗಿನಲ್ಲಿ 1 ಸೆಂ.ಮೀ.ನಷ್ಟು ಮಳೆ ಸುರಿದಿದೆ. ಭಾನುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲೆಡೆ ಒಣಹವೆ ಇರಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next