Advertisement

ರಾಣಿಬೆನ್ನೂರಲ್ಲಿ ಆಲಿಕಲ್ಲು ಮಳೆ

04:15 PM Feb 19, 2021 | Team Udayavani |

ಹಾವೇರಿ: ಜಿಲ್ಲೆಯ ರಾಣಿಬೆನ್ನೂರು ತಾಲೂಕಿನಲ್ಲಿ ಗುರುವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ.

Advertisement

ಜಿಲ್ಲಾದ್ಯಂತ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು. ಸಂಜೆ 6.30 ಗಂಟೆ ಸುಮಾರಿಗೆ ರಾಣಿಬೆನ್ನೂರು ಭಾಗದಲ್ಲಿ ಏಕಾಏಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಅಕಾಲಿಕ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಯಿತು.

ಮಳೆಯಿಂದಾಗಿ ರಾಣಿಬೆನ್ನೂರು ನಗರದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ವಿದ್ಯುತ್‌  ವ್ಯತ್ಯಯವಾಯಿತು. ಉಳಿದಂತೆ ಜಿಲ್ಲೆಯ ಹಾವೇರಿ, ಹಿರೇಕೆರೂರು, ಶಿಗ್ಗಾವಿ, ಹಾನಗಲ್ಲ ತಾಲೂಕಿನಲ್ಲಿ ಸಂಜೆ ಮೋಡ ಕವಿದ ವಾತಾವರಣ ಕಂಡು ಬಂದಿತು.

Advertisement

Udayavani is now on Telegram. Click here to join our channel and stay updated with the latest news.

Next