Advertisement
ಮಂಗಳೂರು ನಗರದಲ್ಲಿ ಮಂಗಳವಾರ ದಿನವಿಡೀ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸಂಜೆ ಮತ್ತು ರಾತ್ರಿ ವೇಳೆ ಉತ್ತಮ ಮಳೆಯಾಗಿದೆ. ಬೆಳ್ತಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿ ಕಾಶಿಬೆಟ್ಟು ಬಳಿ ಮೋರಿ ಕುಸಿತ ಉಂಟಾಗಿದೆ. ಜಿಲ್ಲೆಯ ಮಂಗಳೂರು, ಸುರತ್ಕಲ್, ಮೂಡುಬಿದಿರೆ, ಪುತ್ತೂರು, ಉಪ್ಪಿನಂಗಡಿ, ಕಡಬ, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆ, ಮಡಂತ್ಯಾರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಯಾದ ವರದಿಯಾಗಿದೆ.
ಕರಾವಳಿ ಭಾಗದಲ್ಲಿ ಮತ್ತೆ ಮಳೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಜು. 13 ಮತ್ತು 14ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ. ಜು. 15ರಿಂದ 17ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.