Advertisement
ಕರಾವಳಿಯಲ್ಲಿ ಹಿಂಗಾರು ಕ್ಷೀಣಿಸಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯ ಅಲ್ಲಲ್ಲಿ ಮೋಡ ಮತ್ತು ಸಾಧಾರಣ ಮಳೆ ಸಾಧ್ಯತೆ ಇದೆ. ಭಾರತೀಯ ಹವಾ ಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಸದ್ಯಕ್ಕೆ ಯಾವುದೇ ಅಲರ್ಟ್ ಘೋಷಿಸಿಲ್ಲ.
ಮಂಗಳೂರು ಸಹಿತ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ಬೇಗೆ ಹೆಚ್ಚು ಇತ್ತು. ಐಎಂಡಿ ಮಾಹಿತಿಯಂತೆ ಮಂಗಳೂರಿನಲ್ಲಿ 31.1 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಕಡಿಮೆ ಇತ್ತು. 25.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಹೆಚ್ಚು ಇತ್ತು. ಇದನ್ನೂ ಓದಿ: Malpe: ಈಡೇರದ 5 ದಶಕಗಳ ಬೇಡಿಕೆ, ನಿತ್ಯ ಟ್ರಾಫಿಕ್ ಜಾಮ್ ಕಿರಿಕಿರಿ