Advertisement
ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನ ಕೆರೆ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ವಿಟ್ಲ, ಕನ್ಯಾನ, ಮಡಂತ್ಯಾರು, ಉಳ್ಳಾಲ ಸುಳ್ಯ, ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಬುಧವಾರ ಉತ್ತಮ ಮಳೆಯಾಗಿದೆ. ತೆಕ್ಕಟ್ಟೆ, ಕುಂದಾಪುರ, ಬೈಂದೂರು, ಕಾರ್ಕಳ, ಪಡುಬಿದ್ರಿ, ಕಾಪು ಭಾಗಗಳಲ್ಲಿ ಸಾಧಾರಣ ಮಳೆಯಾಯಿತು. ಉಡುಪಿ ನಗರದಲ್ಲಿ ರಾತ್ರಿ ಭಾರೀ ಮಳೆ ಸುರಿದಿತ್ತು. ಕಾಸರಗೋಡು: ಎಲ್ಲೊ ಅಲರ್ಟ್
ಕಾಸರಗೋಡು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದ ತನಕ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ಆ.29 ರಂದು ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ಮಲಪ್ಪುರ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ.
Related Articles
ಮಡಿಕೇರಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆಯಾಗುತ್ತಿದೆ. ಬುಧವಾರ ಕೆಲವೆಡೆ ಉತ್ತಮ ಮಳೆ ಯಾಗಿದ್ದು, ಹೆದ್ದಾರಿಯಲ್ಲಿ ಬೃಹತ್ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
Advertisement
ಮಡಿಕೇರಿ ವ್ಯಾಪ್ತಿಯಲ್ಲಿ ಸಂಜೆ ಸುರಿದ ಮಳೆಗೆ 2ನೇ ಮೊಣ್ಣಂಗೇರಿ ಸಮೀಪ ಮಂಗಳೂರು ಹೆದ್ದಾರಿಯಲ್ಲಿ ಬೃಹತ್ ಮರ ಉರುಳಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆಲವು ಗಂಟೆಗಳ ಬಳಿಕ ಮರವನ್ನು ತೆರವುಗೊಳಿಸಲಾಯಿತು.