ಉಡುಪಿ: ನಗರ ಸಹಿತ ಹಲವೆಡೆ ಶುಕ್ರವಾರ ಸಂಜೆ ಧಾರಾಕಾರ ಮಹಿಳೆಯಾಗಿದ್ದು, ಗುಡುಗು ಸಿಡಿಲು ಸಹಿತ ಬಿಟ್ಟುಬಿಟ್ಟು ಮಳೆ ಸುರಿದಿದೆ.
ಶುಕ್ರವಾರ ಸಂಜೆ ಮಳೆಯ ವಾತಾವರಣ ಮತ್ತು ದೀಪಾವಳಿ ವಾರಾಂತ್ಯ ರಜೆ ಹಿನ್ನೆಲೆಯಲ್ಲಿ ನಗರದಲ್ಲಿ ಹೆಚ್ಚಿನ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್‌ನಿಂದ ಹೈರಾಣಾದರು.
ಉಡುಪಿ, ಮಲ್ಪೆ, ಪರ್ಕಳ, ಮಣಿಪಾಲ ಸುತ್ತಮುತ್ತ ಗುರುವಾರ ತಡರಾತ್ರಿ, ಶುಕ್ರವಾರ ರಾತ್ರಿ ನಿರಂತರ ಮಳೆಯಾಗಿದೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.
ಕಾರ್ಕಳ ಸದಾಶಿವ ನಾಯ್ಕ ಅವರ ಮನೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಸೆಕೆ ಹೆಚ್ಚಿದೆ.