Advertisement
ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ತುಂತುರು ಮಳೆಯಾಗಿದ್ದು, ಸಂಜೆ 7 ಗಂಟೆ ವೇಳೆಗೆ ಮಳೆ ಬಿರುಸು ಪಡೆದಿತ್ತು. ಮಳೆಗೆ ನಗರದ ಕೆಲವೊಂದು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ಪುತ್ತೂರು, ಬಂಟ್ವಾಳ ತಾಲೂಕಿನ ಹಲವು ಕಡೆ ಮಳೆಯಾಗಿದೆ.
ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರ ಹಲವೆಡೆ ಮಳೆಯಾಗಿದೆ. ಕುಂದಾಪುರ, ಕಾರ್ಕಳ, ಕಾಪು, ಬ್ರಹ್ಮಾವರ ಭಾಗದ ಕೆಲವೆಡೆ ಬಿಟ್ಟುಬಿಟ್ಟು ಮಳೆಯಾಗಿದೆ. ಉಡುಪಿ, ಮಣಿಪಾಲ, ಮಲ್ಪೆ, ಸುತ್ತಮುತ್ತ ಸಂಜೆ ವೇಳೆ ಮಳೆ ಸುರಿದಿದೆ.
ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮತ್ತೆ ಬಿರುಸು ಪಡೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಜೂನ್ 11ರಿಂದ 14ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಿದ್ದು, ಈ ವೇಳೆ ಗುಡುಗು, ಗಾಳಿ ಸಹಿತ ಬಿರುಸಿನ ಮಳೆ ಸುರಿಯುವ ನಿರೀಕ್ಷೆ ಇದೆ. ಜಿಲ್ಲೆಯಲ್ಲಿ ಉಷ್ಣಾಂಶ ಕಡಿಮೆಯಾಗಿದ್ದು, 31.1 ಡಿ.ಸೆ. ಗರಿಷ್ಠ ಮತ್ತು 24.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.