Advertisement

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಸಾಧ್ಯತೆ

10:27 PM Nov 02, 2022 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುರುವಾರ ಯೆಲ್ಲೋ ಅಲರ್ಟ್‌ ಘೋಷಿಸಿದ್ದು ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಉಳಿದೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ನ.7ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.

7 ಸೆಂ.ಮೀ. ಮಳೆ: ಮಂಗಳವಾರ ರಾಮನಗರ ಜಿಲ್ಲೆಯ ಕನಕಪುರದಲ್ಲಿ 7 ಸೆಂ.ಮೀ. ಮಳೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 3 ಸೆಂ.ಮೀ. ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 2 ಸೆಂ.ಮೀ. ಮಳೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next