Advertisement

ರಾಜ್ಯದಲ್ಲಿ ಮಳೆ ಸಾಧ್ಯತೆ

10:49 PM Mar 18, 2020 | Team Udayavani |

ಬೆಂಗಳೂರು: ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ತೆಲಂಗಾಣದ ವಿವಿಧೆಡೆ ಮಳೆಯಾಗುತ್ತಿದ್ದು, ರಾಜ್ಯದಲ್ಲೂ 2-3 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement

ಮಾ.19 ಮತ್ತು 20ರಂದು ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ವಿಜಯಪುರ, ಮಾ.20 ಮತ್ತು 21ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು 38.8 ಡಿ.ಸೆ.ಉಷ್ಣಾಂಶ ದಾಖಲಾದರೆ, ಮಂಡ್ಯದಲ್ಲಿ ಅತಿ ಕಡಿಮೆ 18.8 ಡಿ.ಸೆ.ಉಷ್ಣಾಂಶ ದಾಖಲಾಗಿದೆ. ಈ ಮಾಸಾಂತ್ಯದ ವೇಳೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ ದಾಟುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ, ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next