Advertisement
ಖಾನಾಪುರ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ನದಿಗೆ 11,192 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯ ಭರ್ತಿಯಾಗಿದ್ದರಿಂದ 9644 ಕ್ಯೂಸೆಕ್ ನೀರು ಹೊರ ಬಿಡುತ್ತಿದ್ದು ತೀರ ಪ್ರದೇಶದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಘಟಪ್ರಭಾ ಜಲಾಶಯಕ್ಕೆ 13,524 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು 13,195 ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದರಿಂದ ತುಂಗಭದ್ರಾ ನದಿಗೆ 23725 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಭರ್ತಿಗೆ ಇನ್ನು 19 ಟಿಎಂಸಿ ಮಾತ್ರ ಬಾಕಿ ಇದೆ.
ಬೆಂಗಳೂರು: ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದರೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನಿರಂತರ ಗಾಳಿಯ ವೇಗ 30-40 ಕಿ.ಮೀ. ಇರಲಿವೆ.