Advertisement

Heavy Rain: ಕರಾವಳಿ ಜಿಲ್ಲೆಗಳಲ್ಲಿ ಜು.19ರಂದು ರೆಡ್‌ ಅಲರ್ಟ್‌!

11:17 PM Jul 18, 2024 | Team Udayavani |

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಜುಲೈ 19ರಂದು ಹವಾಮಾನ ಇಲಾಖೆಯು ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.

Advertisement

ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಯಾದಗಿರಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಘೋಷಿಸಿದೆ.

ರಾಜ್ಯದ  6 ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ
ಬೆಂಗಳೂರು: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಕೊಡಗು, ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಅಂಗನವಾಡಿಯಿಂದ ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಿಸಲಾಗಿದೆ.

ಹಾಸನ ಜಿಲ್ಲೆಯ ಹಾಸನ, ಆಲೂರು, ಸಕಲೇಶಪುರ, ಬೇಲೂರು, ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಭದ್ರಾವತಿ, ಉತ್ತರ ಕನ್ನಡ ಜಿಲ್ಲೆಯ 12 ತಾಲೂಕಿನಲ್ಲಿ ಜು. 19ರಂದು, ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ 19, 20ರಂದು 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next