Advertisement

Rain ಕರಾವಳಿಯಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆ

12:42 AM Sep 02, 2024 | Team Udayavani |

ಮಂಗಳೂರು: ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಮಳೆ ಮುಂದುವರೆಯುವ ಸಾಧ್ಯತೆ ಇದೆ. ರವಿವಾರ ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.ಮಂಗಳೂರಿನಲ್ಲಿ 28.4 ಡಿ.ಸೆ. ಗರಿಷ್ಠ ಮತ್ತು 23 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

Advertisement

ಸುಳ್ಯ, ಸುಬ್ರಹ್ಮಣ್ಯ: ಸಾಧಾರಣ ಮಳೆ
ಸುಬ್ರಹ್ಮಣ್ಯ/ಸುಳ್ಯ: ಕಡಬ ಹಾಗೂ ಸುಳ್ಯ ತಾಲೂಕಿನಲ್ಲಿ ರವಿವಾರ ಸಾಧಾರಣ ಮಳೆಯಾಗಿದೆ.

ಸುಳ್ಯ ತಾಲೂಕಿನ ವಿವಿಧೆಡೆ ದಿನದ ಬಹು ಸಮಯ ಸಾಧಾರಣ ಮಳೆಯಾಗಿದ್ದು, ಬೆಳಗ್ಗೆ ಹಾಗೂ ಸಂಜೆ ಧಾರಾಕಾರ ಮಳೆಯಾಗಿದೆ. ಸುಬ್ರಹ್ಮಣ್ಯ, ಕಡಬ ಪರಿಸರದಲ್ಲೂ ಸಾಧಾರಣ ಮಳೆಯಾಗಿದೆ. ಸುಳ್ಯ ತಾಲೂಕಿನ ಸುಳ್ಯ ನಗರ, ಜಾಲೂÕರು, ಬೆಳ್ಳಾರೆ, ಸಂಪಾಜೆ, ಕೊಲ್ಲಮೊಗ್ರು, ಗುತ್ತಿಗಾರು, ಪಂಜ, ಸುಬ್ರಹ್ಮಣ್ಯ, ಕಡಬ, ಬಳ್ಪ, ಬಿಳಿನೆಲೆ, ಎಡಮಂಗಲ ಮತ್ತಿತರ ಪರಿಸರದಲ್ಲೂ ಸಾಧಾರಣ ಮಳೆಯಾಗಿತ್ತು.

ಉಡುಪಿ: ಅಲ್ಲಲ್ಲಿ ಮಳೆ
ಉಡುಪಿ: ಜಿಲ್ಲೆಯಲ್ಲಿ ರವಿವಾರ ಬಿಟ್ಟುಬಿಟ್ಟು ಸಾಧಾರಣ ಮಳೆಯಾಗಿದೆ. ಉಡುಪಿ, ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ಕಾಪು, ಕಾರ್ಕಳ ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಕೆಲಕಾಲ ಸಾಧಾರಣ ಮಳೆಯಾಗಿದೆ. ಶನಿವಾರ ತಡರಾತ್ರಿ ಕೆಲಕಾಲ ಉತ್ತಮ ಮಳೆ ಸುರಿದಿತ್ತು.

ದ.ಕ., ಉಡುಪಿಗೆ ಎಲ್ಲೋ,
ಉತ್ತರ ಕನ್ನಡಕ್ಕೆ ಆರೆಂಜ್‌ ಅಲರ್ಟ್‌
ಸೋಮವಾರ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಸಹಿತ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ ಮತ್ತು ಗಾಳಿಯ ವೇಗ ಪ್ರತೀ ಗಂಟೆಗೆ 30ರಿಂದ 40 ಕಿ.ಮೀ. ತಲುಪುವ ಸಾಧ್ಯತೆಗಳಿವೆ. ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next