ಲಕ್ನೋ:ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉತ್ತರಪ್ರದೇಶ, ಗುರುಗ್ರಾಮ್, ದೆಹಲಿ ತತ್ತರಿಸಿಹೋಗಿದ್ದು, ಉತ್ತರಪ್ರದೇಶದ ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಖಾಸಗಿ ಮತ್ತು ಕಾರ್ಪೋರೇಟ್ ಕಚೇರಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಆಯ್ಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಉಡುಪಿ: ಅನುಮತಿಯಿಲ್ಲದೆ ಪ್ರತಿಭಟನೆ ಆರೋಪ; ಪಿಎಫ್ ಐ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು
ಉತ್ತರಪ್ರದೇಶದ ವಿವಿಧೆಡೆ ಭಾರೀ ಮಳೆ, ಸಿಡಿಲಿನಿಂದಾಗಿ ಗೋಡೆ, ಮನೆಗಳು ಕುಸಿದು ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಫಿರೋಜ್ ಬಾದ್, ಅಲಿಘಡ್ ನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.
ಗುರುವಾರ ಸಂಜೆ 5.30ರಿಂದ ಶುಕ್ರವಾರ ಬೆಳಗ್ಗೆ 8.30ರವರೆಗೆ ದೆಹಲಿಯಲ್ಲಿ 40.8 ಮಿಲಿ ಮೀಟರ್ ಮಳೆಯಾಗಿದ್ದು, ಸತತ ಮೂರು ದಿನಗಳಿಂದ ದೆಹಲಿಯಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳಲ್ಲಿನ ರಸ್ತೆಗಳು ಜಲಾವೃತಗೊಂಡಿದೆ.
ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗೌತಮ್ ಬುದ್ಧ ನಗರದಲ್ಲಿ 1ರಿಂದ 8ನೇ ತರಗತಿಯವರೆಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರಪ್ರದೇಶದಲ್ಲಿಯೂ ರಜೆ ಘೋಷಿಸಲಾಗಿದೆ ಎಂದು ವರದಿ ತಿಳಿಸಿದೆ.
Heavy rain, Noida, Gurugram, Schools closed, City, Udayavani News, ಭಾರೀ ಮಳೆ, ಉತ್ತರಪ್ರದೇಶ, ರಜೆ ಘೋಷಣೆ, ಉತ್ತರಪ್ರದೇಶ