Advertisement

ಮಳೆ: ಮೂರು ದಿನದೊಳಗೆ ವರದಿ ಸಲ್ಲಿಸಿ

04:43 PM Jun 07, 2018 | Team Udayavani |

ಧಾರವಾಡ: ಮಳೆಯಿಂದ ಜನ, ಜಾನುವಾರು, ಮನೆ ಮತ್ತು ರೈತರ ಬೆಳೆ ಹಾನಿಯ ಬಗ್ಗೆ ಎಲ್ಲ ಇಲಾಖೆಯ ಅಧಿಕಾರಿಗಳು ತಾಲೂಕು ಆಡಳಿತಕ್ಕೆ ಮೂರು ದಿನಗಳೊಳಗೆ ವರದಿ ನೀಡಬೇಕು ಎಂದು ತಹಶೀಲ್ದಾರ್‌ ಪ್ರಕಾಶ ಕುದರಿ ಸೂಚಿಸಿದರು.

Advertisement

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಬುಧವಾರ ಸಂಜೆ ಜರುಗಿದ ತುರ್ತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಧಿ ತರಿಗೆ ನಿಯಮಾನುಸಾರ ಪರಿಹಾರ ನೀಡಲು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಬೇಕು. ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಸ್ಥಾನಿಕ ಪರಿಶೀಲನೆ ನಡೆಸಿ ನಿಗದಿತ ಅವಧಿಯಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದರು. ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿ ಕಾರಿಗಳು ಸಭೆಯಲ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next