Advertisement
ಕಡಬ, ಸುಳ್ಯ, ಸುಬ್ರಹ್ಮಣ್ಯ, ಕೊಂಬಾರು, ಎಣ್ಮೂರು ಪರಿಸರದಲ್ಲಿ ಗುಡುಗು ಸಹಿತ ಮಳೆ ಉತ್ತಮ ಮಳೆ ಬಂದಿದೆ. ಪುತ್ತೂರು, ಉಪ್ಪಿನಂಗಡಿ, ಐವರ್ನಾಡು, ಬೆಳ್ಳಾರೆ, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ಬಂಟ್ವಾಳ, ಮಡಂತ್ಯಾರು ಸಹಿತ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ಭಾಗದಲ್ಲೂ ಮಳೆಯಾಗಿದೆ.
ಬಿರುಸು ಸಾಧ್ಯತೆ
ಪಶ್ಚಿಮ ಮಧ್ಯ ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗಿದ್ದು, ಅ. 21ಕ್ಕೆ ಚಂಡಮಾರುತವಾಗಿ ಪರಿವರ್ತನೆ ಯಾಗಲಿದೆ. ಅ. 22ರ ಬಳಿಕ ಮಳೆ ಮತ್ತಷ್ಟು ತೀವ್ರತೆ ಪಡೆಯುವ ಸಾಧ್ಯತೆ ಇದೆ. ಇದರ ಪರಿಣಾಮ ಕರಾವಳಿ ಭಾಗಕ್ಕೆ ಅಷ್ಟೊಂದು ಇಲ್ಲದಿದ್ದರೂ ಕೆಲವೊಂದು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಸದ್ಯಕ್ಕೆ ಯಾವುದೇ ಅಲರ್ಟ್ ಘೋಷಿಸಲಿಲ್ಲ. ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಂಗಳೂರಿನಲ್ಲಿ ಶುಕ್ರವಾರ 31.6 ಡಿ.ಸೆ. ಗರಿಷ್ಠ ಮತ್ತು 24.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.