ಉಡುಪಿ/ ಮಂಗಳೂರು: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ನಿರಂತರ ಮಳೆ ಯಾಗುತ್ತಿದ್ದು, ಮಂಗಳವಾರ ತಡರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಮಲ್ಪೆ, ಮಣಿಪಾಲ, ಪರ್ಕಳ, ಉಡುಪಿ ಸುತ್ತಮುತ್ತ ರಾತ್ರಿವೇಳೆ ನಿರಂತರ ಮಳೆಯಾಗಿದೆ. ಗುಡುಗು ಸಿಡಿಲಿನ ಅಬ್ಬರ ಜೋರಾಗಿದ್ದು, ಬಹುತೇಕ ಕಡೆ ಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.
ಕಾರ್ಕಳ ಭಾಗದಲ್ಲಿ ನಿಟ್ಟೆ ಕೋರತಿ, ಪಳ್ಳಿಯಲ್ಲಿ ವಿಜಯ ಅವರ ಮನೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದೆ.
ಬುಧವಾರ ರಾತ್ರಿಯೂ ಉಡುಪಿ ಜಿಲ್ಲೆಯ ವಿವಿಧೆಡೆ,ಮಂಗಳೂರು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಪುತ್ತೂರು ಸೇರಿದಂತೆ ದ.ಕ. ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಹಗಲಿ ನಲ್ಲಿ ಹೆಚ್ಚಿನ ಕಡೆಗಳಲ್ಲಿ ಬಿಸಿಲು, ಮೋಡದ ವಾತಾವರಣ ಇತ್ತು. ಮಂಗಳೂರಿನಲ್ಲಿ 30.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಕನಿಷ್ಠ ಇತ್ತು. 24.1 ಡಿ.ಸೆ. ಕನಿಷ್ಠ ತಾಪ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚು ಇತ್ತು.
ಉತ್ತಮ ಮಳೆಯ ನಿರೀಕ್ಷೆ
ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಮುನ್ಸೂಚನೆ ಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ನ. 9ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.